2 Chronicles 34:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
Kannada BSI Bible 2016
ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.
Kannada Bible (KNCL) BSI 2016
ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,