2 Chronicles 34:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
Kannada BSI Bible 2016
ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವದಕ್ಕೋಸ್ಕರ ಅಚಲ್ಯನ ಮಗನಾದ ಶಾಫಾನನನ್ನೂ ಪುರಾಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
Kannada Bible (KNCL) BSI 2016
ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.