2 Chronicles 34:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
Kannada BSI Bible 2016
ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು
Kannada Bible (KNCL) BSI 2016
ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್‍ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.