2 Chronicles 35:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.
Kannada BSI Bible 2016
ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇವಿುನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು; ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ವಧಿಸಿದರು.
Kannada Bible (KNCL) BSI 2016
ಯೋಷೀಯನು ಸರ್ವೇಶ್ವರನಿಗೆ ಜೆರುಸಲೇಮಿನಲ್ಲಿ ಪಾಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.