2 Chronicles 35:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಬೇರೆಬೇರೆ ಕುಲಗಳವರಿಗೆ ಸರ್ವಾಂಗಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಈ ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
Kannada BSI Bible 2016
ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಚರ್ಮಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರ ಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
Kannada Bible (KNCL) BSI 2016
ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.