2 Chronicles 35:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.
Kannada BSI Bible 2016
ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.
Kannada Bible (KNCL) BSI 2016
ಆಮೇಲೆ ಲೇವಿಯರು ಪಾಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟರು; ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.