2 Chronicles 35:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.
Kannada BSI Bible 2016
ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಸಿದ್ಧಮಾಡಿದರು.
Kannada Bible (KNCL) BSI 2016
ತರುವಾಯ ತಮಗೆ ಹಾಗು ಯಾಜಕರಿಗೆ ಭೋಜನವನ್ನು ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ದಹನಬಲಿಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದುದರಿಂದ ಲೇವಿಯರು ತಮಗೆ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೂ ಭೋಜನವನ್ನು ಸಿದ್ಧಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.