2 Chronicles 35:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.
Kannada BSI Bible 2016
ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು.
Kannada Bible (KNCL) BSI 2016
ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.