2 Chronicles 35:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯಕ್ಕಾಗಿ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಯೋಷೀಯನು ಮಾಡಿದನು. ಸ್ವಲ್ಪಕಾಲವಾದ ಬಳಿಕ ಈಜಿಪ್ಟಿನ ಅರಸನಾದ ನೆಕೋ ಯೂಫ್ರೇಟೀಸ್ ನದಿಯ ಬಳಿಯಲ್ಲಿದ್ದ ಕರ್ಕೆಮೀಷ್ ಪಟ್ಟಣದ ಮೇಲೆ ಯುದ್ಧಮಾಡಲು ಹೊರಟನು. ಅರಸನಾದ ಯೋಷೀಯನು ನೆಕೋನ ಮೇಲೆ ಯುದ್ಧಮಾಡಲು ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.
Kannada BSI Bible 2016
ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.
Kannada Bible (KNCL) BSI 2016
ಯೋಷೀಯನು ಮಹಾದೇವಾಲಯದ ವಿಷಯದಲ್ಲಿ ಈ ಎಲ್ಲ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ರಾಜ ನೆಕೋ ಎಂಬುವನು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.