2 Chronicles 35:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.
Kannada BSI Bible 2016
ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು.
Kannada Bible (KNCL) BSI 2016
ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.