2 Chronicles 36:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
Kannada BSI Bible 2016
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.
Kannada Bible (KNCL) BSI 2016
ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.