2 Chronicles 36:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿದ್ಕೀಯನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ಅವನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದನು. ಪ್ರವಾದಿಯಾದ ಯೆರೆಮೀಯನು ದೇವರ ಸಂದೇಶವನ್ನು ಕೊಡುತ್ತಾ ಬಂದನು. ಆದರೆ ಚಿದ್ಕೀಯನು ದೇವರೆದುರಿಗೆ ತನ್ನನ್ನು ತಗ್ಗಿಸಿಕೊಳ್ಳದೆ ಯೆರೆಮೀಯನ ಮೂಲಕ ಬಂದ ದೇವರ ಆಜ್ಞೆಗಳಿಗೆ ವಿಧೇಯನಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
Kannada BSI Bible 2016
ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಯೆಹೋವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
Kannada Bible (KNCL) BSI 2016
ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.