2 Chronicles 36:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
Kannada BSI Bible 2016
ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು.
Kannada Bible (KNCL) BSI 2016
ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.