2 Chronicles 36:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Kannada BSI Bible 2016
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲಿಗೆ ಸೆರೆಯೊಯ್ದನು. ಪಾರಸಿಯ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Kannada Bible (KNCL) BSI 2016
ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.