2 Chronicles 36:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
Kannada BSI Bible 2016
ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -
Kannada Bible (KNCL) BSI 2016
ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,