2 Chronicles 36:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ, ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
Kannada BSI Bible 2016
ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ ತನಗೋಸ್ಕರ ಯೆಹೂದದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಹೋಗಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು ಎಂದು ಪ್ರಕಟಿಸಿದನು.
Kannada Bible (KNCL) BSI 2016
\ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.