2 Chronicles 36:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ಈಜಿಪ್ಟಿನ ನೆಕೋ ಯೆಹೋವಾಹಾಜನನ್ನು ಕೈದಿಯನ್ನಾಗಿ ಮಾಡಿದನು. ಯೆಹೂದದ ಜನರು ತನಗೆ ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ಕೊಡಲು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
Kannada BSI Bible 2016
ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದ ಅರಸನು ಯೆರೂಸಲೇವಿುಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
Kannada Bible (KNCL) BSI 2016
ಈಜಿಪ್ಟಿನ ರಾಜನು ಜೆರುಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ 3400 ಕಿಲೋಗ್ರಾಂ ಬೆಳ್ಳಿಯನ್ನೂ 34 ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.