2 Chronicles 36:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada BSI Bible 2016
ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Kannada Bible (KNCL) BSI 2016
ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.