2 Chronicles 36:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಬೂಕದ್ನೆಚ್ಚರನು ದೇವಾಲಯದಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡು ಹೋಗಿ ಬಾಬಿಲೋನಿನ ತನ್ನ ಅರಮನೆಯಲ್ಲಿ ಇಟ್ಟುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
Kannada BSI Bible 2016
ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಬೇಡಿಹಾಕಿ ಯೆಹೋವನ ಆಲಯದ ಹಲವು ಸಾಮಾನುಗಳನ್ನು ಬಾಬೆಲಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. ಯೆಹೋಯಾಕೀಮನ ಉಳಿದ ಚರಿತ್ರೆಯೂ
Kannada Bible (KNCL) BSI 2016
ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.