2 Chronicles 36:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಕೀಮನು ಮಾಡಿದ ದುಷ್ಕ್ರಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
Kannada BSI Bible 2016
ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಡಿಸಿದ ಅಸಹ್ಯಕೃತ್ಯಗಳೂ ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
Kannada Bible (KNCL) BSI 2016
ಯೆಹೋಯಾಕೀಮನ ಉಳಿದ ಚರಿತ್ರೆ ಅವನು ನಡಿಸಿದ ಅಸಹ್ಯಕೃತ್ಯಗಳು ಹಾಗು ಅವನಲ್ಲಿ ಕಂಡುಬಂದದ್ದೆಲ್ಲವು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಕೀನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.