2 Chronicles 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.
Kannada BSI Bible 2016
ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಸಾಮಾನುಗಳು ಯಾವವಂದರೆ -
Kannada Bible (KNCL) BSI 2016
ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: