2 Chronicles 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
Kannada BSI Bible 2016
ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.
Kannada Bible (KNCL) BSI 2016
ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;