2 Chronicles 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಅಂಗಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.
Kannada BSI Bible 2016
ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.
Kannada Bible (KNCL) BSI 2016
ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.