2 Chronicles 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ತಾಮ್ರದ ಎರಕದ ಪಾತ್ರೆಯು ಮೂರು ಇಂಚು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದರಲ್ಲಿ ಅರವತ್ತಾರು ಸಾವಿರ ಲೀಟರ್ ನೀರನ್ನು ತುಂಬ ಬಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.
Kannada BSI Bible 2016
ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಹಿಂಭಾಗವು ಒಳಗಡೆಗಿತ್ತು. ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಮೂರು ಸಾವಿರ ಬತ್ ನೀರನ್ನು ಹಿಡಿಯುವದು.
Kannada Bible (KNCL) BSI 2016
ಆ ಪಾತ್ರೆಯ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಅರವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.