2 Chronicles 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.
Kannada BSI Bible 2016
ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾರು ಬಟ್ಟೆಗಳನ್ನು ಧರಿಸಿಕೊಂಡು ತಾಳ ಸ್ವರಮಂಡಲ ಕಿನ್ನರಿ ಇವುಗಳನ್ನು ಹಿಡಿದುಕೊಂಡ ಲೇವಿಯ ಗಾಯಕರಾದ ಆಸಾಫ್‍ಹೇಮಾನ್ ಯೆದುತೂನರೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.
Kannada Bible (KNCL) BSI 2016
ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.