2 Chronicles 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
Kannada BSI Bible 2016
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
Kannada Bible (KNCL) BSI 2016
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.