2 Chronicles 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.
Kannada BSI Bible 2016
ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇವಿುಗೆ ಕರಿಸಿಕೊಂಡನು.
Kannada Bible (KNCL) BSI 2016
ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.