2 Chronicles 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಮತ್ತು ಇಸ್ರೇಲರೆಲ್ಲರೂ ಆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಞ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.
Kannada BSI Bible 2016
ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್‌ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
Kannada Bible (KNCL) BSI 2016
ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಸೊಲೊಮೋನನೂ ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ, ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.