2 Chronicles 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
Kannada BSI Bible 2016
ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
Kannada Bible (KNCL) BSI 2016
ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಆದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.