2 Chronicles 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.
Kannada BSI Bible 2016
ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.
Kannada Bible (KNCL) BSI 2016
ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.