2 Chronicles 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,
Kannada BSI Bible 2016
ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಐದು ಮೊಳ ಉದ್ದ, ಐದು ಮೊಳ ಅಗಲ, ಮೂರು ಮೊಳ ಎತ್ತರವಾಗಿರುವ ಒಂದು ತಾಮ್ರಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿಡಿಸಿದ್ದನು. ಅವನು ಇಸ್ರಾಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು -
Kannada Bible (KNCL) BSI 2016
ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,