2 Chronicles 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.
Kannada BSI Bible 2016
ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.
Kannada Bible (KNCL) BSI 2016
“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ.