2 Chronicles 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
Kannada BSI Bible 2016
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಿಜವಾಗಿ ಮನುಷ್ಯರೊಡನೆ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
Kannada Bible (KNCL) BSI 2016
“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?