2 Chronicles 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು.
Kannada BSI Bible 2016
ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
Kannada Bible (KNCL) BSI 2016
ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.