2 Chronicles 6:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
Kannada BSI Bible 2016
ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.
Kannada Bible (KNCL) BSI 2016
ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.