2 Chronicles 6:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
Kannada BSI Bible 2016
ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.
Kannada Bible (KNCL) BSI 2016
ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸುವಾಗ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.