2 Chronicles 6:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನು ಪರಲೋಕದಿಂದ ಅವರ ಮೊರೆಯನ್ನು ಲಾಲಿಸಿ, ನಿನ್ನ ಜನರ ಪಾಪಗಳನ್ನು ಮನ್ನಿಸು. ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮತ್ತೆ ಬರಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು.
Kannada BSI Bible 2016
ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರಿಗೂ ಅವರ ಪಿತೃಗಳಿಗೂ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
Kannada Bible (KNCL) BSI 2016
ನೀವು ಪರಲೋಕದಿಂದ ಆಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪಿತೃಗಳಿಗೂ ನೀವು ಕೊಟ್ಟ ನಾಡಿಗೆ ಅವರನ್ನು ಮರಳಿ ಬರಮಾಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.