2 Chronicles 6:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,
Kannada BSI Bible 2016
ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಪಾಪಗಳ ನಿವಿುತ್ತವಾಗಿ ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ
Kannada Bible (KNCL) BSI 2016
“ಅವರ ಪಾಪಗಳ ನಿಮಿತ್ತ ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ, ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ, ಈ ಆಲಯದ ಕಡೆಗೆ ತಿರುಗಿಕೊಂಡು, ನಿಮ್ಮನ್ನು ಪ್ರಾರ್ಥಿಸಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,