2 Chronicles 6:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಪರಲೋಕದಿಂದ ಅವರನ್ನು ಆಲೈಸು. ಇಸ್ರೇಲರು ನಿನ್ನ ಸೇವಕರೂ ಪ್ರಜೆಗಳೂ ಆಗಿದ್ದಾರೆ. ಅವರು ಬದುಕುವಂತೆ ಸರಿಯಾದ ಮಾರ್ಗವನ್ನು ಅವರಿಗೆ ತೋರ್ಪಡಿಸು. ಅವರ ದೇಶದ ಮೇಲೆ ಮಳೆಯನ್ನು ಸುರಿಸು. ನಿನ್ನ ಜನರಿಗೆ ನೀನು ಆ ದೇಶವನ್ನೇ ಸ್ವಾಸ್ತ್ಯವಾಗಿ ಕೊಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
Kannada BSI Bible 2016
ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
Kannada Bible (KNCL) BSI 2016
ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ಈ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.