2 Chronicles 6:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಪ್ರಿಯತಮತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,
Kannada BSI Bible 2016
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶಕ್ಕೆ ಕ್ಷಾಮ, ಘೋರವ್ಯಾದಿ, [ಬೆಳೆಗೆ] ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ ಅಂತು ಯಾವ ಉಪದ್ರವದಿಂದಾಗಲಿ ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ
Kannada Bible (KNCL) BSI 2016
“ನಾಡಿಗೆ ಕ್ಷಾಮ, ಘೋರವ್ಯಾಧಿ, ಬೆಳೆಗೆ ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೆಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆಯುಂಟಾದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,