2 Chronicles 6:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.
Kannada BSI Bible 2016
ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.
Kannada Bible (KNCL) BSI 2016
ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗದಲ್ಲೇ ನಡೆಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗಗಳಲ್ಲಿ ನಡೆಯುವರು.