2 Chronicles 6:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.
Kannada BSI Bible 2016
ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಕೇಳಿ ಅವರು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ಈ ಆಲಯವನ್ನು ನಿನ್ನ ಹೆಸರಿನದಾಗಿ ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.
Kannada Bible (KNCL) BSI 2016
ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.