2 Chronicles 6:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದುವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆಮಾಡಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,
Kannada BSI Bible 2016
ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು
Kannada Bible (KNCL) BSI 2016
ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು, ನಿಮ್ಮ ಅನುಗ್ರಹದಿಂದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿ,