2 Chronicles 6:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ, ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ಈ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿಸಿದ ಈ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,
Kannada BSI Bible 2016
ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ
Kannada Bible (KNCL) BSI 2016
ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,