2 Chronicles 6:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
Kannada BSI Bible 2016
ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾದ ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದೊಳಗೆ ಸೇರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.
Kannada Bible (KNCL) BSI 2016
ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.