2 Chronicles 6:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.
Kannada BSI Bible 2016
ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.
Kannada Bible (KNCL) BSI 2016
ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.