2 Chronicles 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
Kannada BSI Bible 2016
ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ನಾನು ಬರಮಾಡಿದ್ದು ಮೊದಲುಗೊಂಡು ಇಸ್ರಾಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ನಾಮದ ನಿವಾಸಕ್ಕೋಸ್ಕರ ಆಲಯಸ್ಥಾನವನ್ನಾಗಿ ಆರಿಸಿಕೊಂಡಿರಲಿಲ್ಲ; ನನ್ನ ಪ್ರಜೆಯಾದ ಇಸ್ರಾಯೇಲ್ಯರ ಪ್ರಭುವಾಗುವದಕ್ಕಾಗಿ ಯಾವನೊಬ್ಬ ಪುರುಷನನ್ನು ಆರಿಸಿಕೊಂಡದ್ದೂ ಇಲ್ಲ.
Kannada Bible (KNCL) BSI 2016
ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.