2 Chronicles 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, “ಸೊಲೊಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಈ ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
Kannada BSI Bible 2016
ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ ಈ ಮನೆಯನ್ನು ನನ್ನ ಯಜ್ಞಾಲಯಕ್ಕಾಗಿ ಆರಿಸಿಕೊಂಡಿದ್ದೇನೆ.
Kannada Bible (KNCL) BSI 2016
ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.