2 Chronicles 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
Kannada BSI Bible 2016
ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.
Kannada Bible (KNCL) BSI 2016
ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.