2 Chronicles 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
Kannada BSI Bible 2016
ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು.
Kannada Bible (KNCL) BSI 2016
ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.